ಬೆಂಗಳೂರು : ವಿವಿಧ ಪ್ರಕರಣಗಳಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ವಿಳಂಭಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಗರಂ ಆಗಿದ್ದಾರೆ.
ವಿವಿಧ ಪ್ರಕರಣಗಳಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ವಿಳಂಬ ಮಾಡಿದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ
ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು. ಇದರಿಂದ ಜನತೆಗೆ ತಪ್ಪು ಸಂದೇಶ ಹೋಗಬಾರದು.ಆದ್ದರಿಂದ ತ್ವರಿತ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶಗಳನ್ನು ಕಳುಹಿಸುವಂತೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.