ಕೋಲಾರ: ಮಂಡ್ಯ ಜಿಲ್ಲೆಯ ಶ್ರೀಗಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ವುಮೆನ್ ಇಂಡಿಯಾ ಮೂವ್ ಮೆಂಟ್ ಮಹಿಳಾ ಸಂಘಟನೆಯ ಮುಸ್ಲಿಂ ಮಹಿಳೆಯರಿಂದ ಕೋಲಾರದ ಜಿಲ್ಲೆಯ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ. ಅಷ್ಟಕ್ಕೂ ಕಾರಣವೆನೆಂದರೆ ಡಿಸೆಂಬರ್ 24ರಂದು ಹನುಮ ಜಯಂತಿ ಕಾರ್ಯಕ್ರಮದ ಅಂಗವಾಗಿ ಮಂಡ್ಯ ಜಿಲ್ಲೆಯ ಶ್ರೀಗಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಂದು ಗಂಡ, ಪರ್ಮನೆಂಟ್ ಗಂಡನೇ ಇರಲಿಲ್ಲ. ಆದರೆ ತ್ರಿವಳಿ ತಲಾಕ್ ನಿಷೇಧದ ಮೂಲಕ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶ್ರೀರಂಗ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಲ್ಲಡ್ಕ ಪ್ರಭಾಕರ್ ಭಟ್, ಈಗಾಗಲೇ ಹೈ ಕೋರ್ಟ್ ನಿಂದ ತಡೆಯಾಜ್ಞೆ ಪಡೆದಿದ್ದಾರೆ.