ಕಲಬುರಗಿ : ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರು ಕಾರು ಅಪಘಾತಕ್ಕೀಡಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಶಾಸಕರ ಕಾರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಜೇವರ್ಗಿ (ಬಿ) ಗ್ರಾಮದ ಬಳಿ ಶುಕ್ರವಾರ ಅಪಘಾತಕ್ಕೀಡಾಗಿದೆ. ಘಟನೆಯಿಂದ ಅದೃಷ್ಟವಶಾತ್ ಶಾಸಕರು ಅಪಾಯದಿಂದ ಪಾರಾಗಿದ್ದಾರೆ.
ಜೇವರ್ಗಿ (ಬಿ) ಗ್ರಾಮದ ಹೊರವಲಯದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ತಗ್ಗುಗುಂಡಿಗೆ ಬಿದ್ದಿದೆ. ಶಾಸಕ ಎಂ. ವೈ ಪಾಟೀಲ್ ಹಾಗೂ ಚಾಲಕ ಮೋಬಿನ್ಗೆ ಸಣ್ಣಪುಟ್ಟ ಗಾಯಗಳಾಗಿದೆ. ಕೂಡಲೇ ಗಾಯಾಳು ಮತ್ತು ಶಾಸಕರನ್ನು ಅವರ ಪುತ್ರ ಡಾ. ಸಂಜೀವ್ ಪಾಟೀಲ್ ಅವರ ಶಾಂತಾಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.