State News

ಅಯೋಧ್ಯೆ ರಾಮ ಮಂದಿರಕ್ಕೆ ಬೃಹದಾಕಾರದ “ಅಳಿಲು ಪುತ್ಥಳಿ”..!

ಬೆಂಗಳೂರು : ರಾಮಾಯಣದಲ್ಲಿ ಶ್ರೀ ರಾಮಸೇತು ನಿರ್ಮಾಣದ ವೇಳೆ ಪುಟ್ಟ ಪ್ರಾಣಿ ಅಳಿಲು ಸಲ್ಲಿಸಿದ ಸೇವೆ ಪ್ರಶಂಸನಾರ್ಹ ಮತ್ತು ಗಮನ ಸೆಳೆಯುವಂತಹದ್ದು. ಇದೇ ಒಂದು ವಿಷಯವನ್ನಿಟ್ಟುಕೊಂಡು ಬೆಂಗಳೂರಿನ ನಾಗಸಂದ್ರದ ಕೈಗಾರಿಕೋದ್ಯಮಿಯೊಬ್ಬರು ನಿರ್ಮಿಸಿರುವ ಬೃಹದಾಕಾರದ ಅಳಿಲು ಪುತ್ಥಳಿ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯ ನವ ನಿರ್ಮಾಣದ ವೇದಿಕೆಯಲ್ಲಿ ಶಾಶ್ವತವಾಗಿ ವಿರಾಜಮಾನವಾಗಲಿದೆ.

ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಪ್ರಸಿದ್ಧಿ ಇಂಜಿನಿಯರ್ಸ್ ಕಂಪನಿಯ ಮಾಲೀಕರಾದ ಸಿ ಪ್ರಕಾಶ್ ಅವರು ಎರಡೂವರೆ ಟನ್ ಕಾರ್ಟನ್ ಸ್ಟೀಲ್ ಬಳಸಿ, 15 ಅಡಿ ಎತ್ತರ ಹಾಗೂ 7.5 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮನ ಸೇವೆ ಎಂದು ನಿರ್ಮಿಸಿರುವ ಬೃಹದಾಕಾರದ ಅಳಿಲು ಪುತ್ಥಳಿ ಅಯೋಧ್ಯೆಯ ರೈಲ್ವೆ ನಿಲ್ದಾಣ ಆವರಣದ ಮಧ್ಯ ಭಾಗದಲ್ಲಿ ಅನಾವರಣಗೊಳ್ಳಲಿದೆ.

ಡಿ.6ರಂದು ಬೃಹದಾಕಾರದ ಅಳಿಲು ಪುತ್ಥಳಿ ಹೊತ್ತ ಟ್ರಕ್ ರಸ್ತೆ ಮಾರ್ಗವಾಗಿ ಅಯೋಧ್ಯೆಯತ್ತ ತೆರಳಿತು. ಇದೇ 11 ನೇ ತಾರೀಖು ಅಯೋಧ್ಯೆಗೆ ತಲುಪಲಿದ್ದು, 12 ನೇ ತಾರೀಖು ಅಯೋಧ್ಯೆ ರೈಲ್ವೆ ನಿಲ್ದಾಣ ಆವರಣದಲ್ಲಿ ಅಳಿಲು ಪ್ರತಿಷ್ಠಾಪನೆಗೊಳ್ಳಲಿದೆ.

ಈ ಪುತ್ಥಳಿ ನಿರ್ಮಾಣಕ್ಕೆ ಕಾರ್ಟನ್ ಸ್ಟೀಲ್ ಬಳಸಿದ್ದು ಇದರಲ್ಲಿ ತಾಮ್ರದ ಮಿಶ್ರಣ ಇರುವುದರಿಂದ 100 ವರ್ಷಗಳಾದರೂ ಸಹ ಪುತ್ಥಳಿ ಯಾವುದೇ ರೀತಿ ಹಾಳಾಗಲು ಸಾಧ್ಯವಿಲ್ಲ. ಜೊತೆಗೆ ನಿರ್ವಹಣೆಗೆ ಯಾವುದೇ ವೆಚ್ಚ ತಗುಲುವುದಿಲ್ಲ ಎಂದು ಪುತ್ಥಳಿ ನಿರ್ಮಾಣ ಇಂಜಿನಿಯರ್ ಧನುಶ್ರೀ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!