ವಾಣಿಜ್ಯ ನಗರಿ ಮುಂಬೈನ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 13 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ.
ಆಸ್ಪತ್ರೆಯ ಎಸಿ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ 90 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಇದರಲ್ಲಿ 18 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.