Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political News

ಸಂವಿಧಾನ, ರಾಷ್ಟ್ರೀಯ ಏಕತೆಯ ಸಮಾವೇಶಕ್ಕೆ ಪೂರ್ವಭಾವಿಯಾಗಿ ಜ. 26ರಿಂದ ಸಂವಿಧಾನ ಜಾಗೃತಿ ಜಾಥಾ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ಗೃಹ ಕಚೇರಿ ಕೃಷ್ಣಾದಲ್ಲಿ” ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ” ನಿಮಿತ್ತ ಸಂಘಟನಾ ಸಮಿತಿ ಸಭೆಯನ್ನು ಸಿಎಂ ಸಿದ್ದರಾಮಯ್ಯ (Cm Siddaramaiah) ನಡೆಸಿದ್ದಾರೆ. ಸಭೆಯಲ್ಲಿ ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನವರಿ 26 ರಿಂದ “ಸಂವಿಧಾನ ಜಾಗೃತಿ ಜಾಥಾ” ಆಯೋಜಿಸಲಾಗುತ್ತದೆ ಎಂದು ತೀರ್ಮಾನ ಮಾಡಲಾಗಿದೆ.

ಸಭೆಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದು ನಡೆದ ” ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ” ಸಂಘಟನಾ ಸಮಿತಿ ಸಭೆಯಲ್ಲಿ ಪ್ರಮುಖ ಅಂಶಗಳನ್ನು ಚರ್ಚೆ ಮಾಡಲಾಯಿತು. ಸಂವಿಧಾನ ಜಾರಿಗೆ ಬಂದು 75 ವರ್ಷಾಚರಣೆಯ ಅಂಗವಾಗಿ “ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ”ವನ್ನು Institute of Social and Economic Change (ISEC), National Law School of India University, Bengaluru ಇವರ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ.

ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನವರಿ 26 ರಿಂದ “ಸಂವಿಧಾನ ಜಾಗೃತಿ ಜಾಥಾ” ಆಯೋಜಿಸಲಾಗುತ್ತದೆ.

ಈ ಜಾಥಾವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಫೆಬ್ರುವರಿ 24 ಹಾಗೂ 25 ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ವಿಚಾರ ಸಂಕಿರಣ ಹಾಗೂ KREIS ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗುವುದು. ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ವಿವಿಧ ವಿಷಯಗಳ ಕುರಿತ ಪರಿಣಿತರ ಚರ್ಚೆಯನ್ನು ಆಧರಿಸಿ, ನಿರ್ಣಯಗಳನ್ನು ಕೈಗೊಳ್ಳಲಾಗುವುದು.

ಇಂದಿನ ಸಮಾಜ ಎದುರಿಸುತ್ತಿರುವ ಎಲ್ಲ ಸಮಸ್ಯೆ, ಸವಾಲುಗಳಿಗೆ ಸಂವಿಧಾನದಲ್ಲಿ ಉತ್ತರವಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸಮಾವೇಶದಲ್ಲಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಅತ್ಯುತ್ತಮ ಚರ್ಚಾಗೋಷ್ಠಿಗಳನ್ನು ಆಯೋಜಿಸುವಂತೆ ಸೂಚಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!