ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಚಳಿ ಆರಂಭವಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಬಿಸಿಲಿರಲಿದ್ದು ಒಣಹವೆ ಮುಂದುವರೆಯಲಿದೆ.
ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾಖಲಾಗಿದೆ.