State News

ಜ. 23ರಂದು PSI ಮರು ಪರೀಕ್ಷೆ..!

ಬೆಂಗಳೂರು : 545 ಪಿಎಸ್‌ಐ( PSI) ಹುದ್ದೆಗಳ ನೇಮಕಾತಿ ಮರು ಪರೀಕ್ಷೆ ಜ. 23ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕಳೆದ ಬಾರಿ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಸೂಚಿಸಲಾಗಿದ್ದು, ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಲಾಗಿದೆ.

ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ..

1.ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು.
2.ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಖಡ್ಡಾಯಗೊಳಿಸಲಾಗಿದೆ.
3.ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
4.ಮೇಲೆ ಹೇಳಲಾಗಿರುವ ಕೆ.ಇ.ಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕ್ರಮವನ್ನು ಜರುಗಿಸಲಾಗುವುದು

ಅಕ್ರಮ ಹಿನ್ನೆಲೆ ಮರು ಪರೀಕ್ಷೆಗೆ ಸೂಚಿಸಿದ್ದ ಹೈಕೋರ್ಟ್‌..!

2021ರ ಜ. 21 ರಂದು ಕರ್ನಾಟಕ ಪೊಲೀಸ್‌ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕಟವಾಗಿತ್ತು. ಅದೇ ವರ್ಷ ಅಕ್ಟೋಬರ್‌ 3 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿಯ ಲಿಖಿತ ಪರೀಕ್ಷೆ ನಡೆಸಲಾಯಿತು. ಆದರೆ ನೇಮಕಾತಿಯಲ್ಲಿ ಭಾರಿ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪಾಲ್ ಸೇರಿ ಹಲವರ ಬಂಧನವಾಗಿತ್ತು. ನಂತರ ಪಿಎಸ್​ಐ ಮರು ಪರೀಕ್ಷೆ ನಡೆಸಲು ಕರ್ನಾಟಕ ಹೈಕೋರ್ಟ್ ನ.10ರಂದು ಆದೇಶ ನೀಡಿತ್ತು. ಹೀಗಾಗಿ ಜ. 23ರಂದು ಪಿಎಸ್ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆ ನಿಗದಿಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!