ಬೆಂಗಳೂರು, ಆ. 5- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 7 ರಂದು ಸೋಮವಾರ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ಚರ್ಚಿಸಲಿದ್ದಾರೆ. ಅಂದು ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಸಭೆಯು ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.00 ರ ವರೆಗೆ ಹಾಗೂ ಸಂಜೆ 4.00 ಗಂಟೆಯಿಂದ 7 ಗಂಟೆಯ ವರೆಗೆ ನಡೆಯಲಿದೆ
0 5 Less than a minute