ಬೆಂಗಳೂರು: ಸರ್ಕಾರದ ವಿರುದ್ಧ ಹೆಚ್ಡಿಕೆ ವರ್ಗಾವಣೆ ದಂಧೆ ಆರೋಪ ವಿಚಾರಕ್ಕೆ ಸಂಬಂಧಿಸಿ ಹೆಚ್.ಡಿ.ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದರು.
ಹೆಚ್.ಡಿ.ಕುಮಾರಸ್ವಾಮಿ ಈಗಷ್ಟೇ ಪ್ರವಾಸ ಮುಗಿಸಿ ಬಂದಿದ್ದಾರೆ. ಅವರು ಸದನದಲ್ಲೂ ಪೆನ್ ಡ್ರೈವ್ ತೋರಿಸಿದ್ದರು. ಸದನಕ್ಕಿಂತ ದೊಡ್ಡ ವೇದಿಕೆ ಬೇರೆಯಿಲ್ಲ, ಅಲ್ಲೇ ಬಹಿರಂಗಗೊಳಿಸಿಲ್ಲ. ಹೆಚ್ಡಿಕೆ ಬಳಿ ಏನಾದರೂ ದಾಖಲೆಗಳಿದ್ದರೆ ಸರ್ಕಾರಕ್ಕೆ ಕೊಡಲಿ ಎಂದರು.