ಬೆಂಗಳೂರು : ಅರಮನೆ ಮೈದಾನದಲ್ಲಿ ಇಂದಿನಿಂದ ‘ಸಿರಿಧಾನ್ಯ ಮತ್ತು ಸಾವಯುವ-2024’ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಕೃಷಿ ಇಲಾಖೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ ಸಂಸ್ಥೆಯ ಸಹಯೋಗದೊಂದಿಗೆ ಆಯೋಜನೆ ಮಾಡಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ಮೂರು ದಿನಗಳ ಕಾಲ ಮಿಲೇಟ್ಸ್ ಮೇಳ (Milates Fair) ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತರಾಮನ್ ಮತ್ತು ಪ್ರಲ್ಹಾದ್ ಜೋಶಿ, ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ರು.
ಈ ಮೇಳದಲ್ಲಿ ಉತ್ತರ ಪ್ರದೇಶ, ಪಂಜಾಬ್, ಆಂಧ್ರ, ಮಹಾರಾಷ್ಟ್ರ, ಒಡಿಸ್ಸಾ, ತಮಿಳುನಾಡು ಮತ್ತು ಮೇಘಾಲಯ ಸೇರಿದಂತೆ ಇನ್ನಿತರ ರಾಜ್ಯಗಳು ಪಾಲ್ಗೊಳ್ಳಲಿದ್ದು, 300 ಮಳಿಗೆಗಳನ್ನು ಸ್ಥಾಪಿಸಲಿದೆ. ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಸಂಪರ್ಕವನ್ನು ಕಲ್ಪಿಸಲು ಮತ್ತು ರೈತರು, ಖರೀದಿದಾರರು, ಮಾರಾಟಗಾರರು, ರಫ್ತುದಾರರಿಗೆ ವಿಪುಲ ಅವಕಾಶಗಳನ್ನು ಒದಗಿಸಲು ಮುಂದಾಗಿದೆ. ಈ ಮೇಳದಲ್ಲಿ ಸಿಟಿ ಮಂದಿಗೆ ಖಾನಾವಳಿಯ ಪುಡ್ ಕೋರ್ಟ್ ಕೂಡ ಇರಲಿದೆ.