ಕೋಲಾರ: ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಘಟನೆ ಬೆಳಕಿಗೆ ಬಂದಿದೆ.
ಇಬ್ಬರು ಯುವಕರು ದೊಣ್ಣೆಯಿಂದ ಹಲ್ಲೆ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗರಾಜ್ ಎಂಬುವರಿಂದ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆ ವೇಳೆ ಮಧು ಎಂಬುವರಿಗೆ ಗಂಭೀರ ಗಾಯವಾಗಿದೆ. ಮನೆಯ ಬಳಿ ಕ್ಷುಲ್ಲಕ ಕಾರಣಕ್ಕೆ ಶುರುವಾಗಿರುವ ಜಗಳ ತೀವ್ರಗೊಂಡು ಹೊಡೆದಾಡಿಕೊಂಡಿದ್ದಾರೆ ವರದಿಯಾಗಿದೆ. ಜಗಳಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ,ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣದ ದಾಖಲಾಗಿದೆ.