ಬೆಂಗಳೂರು : ಥೈಲ್ಯಾಂಡ್ ವಿದೇಶ ಪ್ರವಾಸಕ್ಕೆ ತೆರಳಿದ್ದಾಗ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾಗೆ ಹೃದಯಾಘಾತಗೊಂಡು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಹೃದಯಾಘಾತಗೊಂಡು ಸ್ಥಿತಿ ಗಂಭೀರಗೊಂಡ ಕೂಡಲೇ ಥೈಲ್ಯಾಂಡ್ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ. ರಾಜ್ ಕುಟುಂಬಕ್ಕೆ ಮತ್ತೊಂದು ದೊಡ್ಡ ಶಾಕ್ ಹೊಡೆದಂತಾಗಿದೆ. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಕೊನೆಯುಸಿರೆಳೆದಿದ್ದು, ಸ್ಯಾಂಡಲ್ ವುಡ್ ಆಘಾತಕಾರಿ ಸುದ್ದಿಯಾಗಿದೆ. ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರುವ ಸಾಧ್ಯತೆಯಿದೆ.