ಬೆಂಗಳೂರು : ನಟ ಯಶ್ ಹುಟ್ಟುಹಬ್ಬ ನಿಮಿತ್ತ ಕಟೌಟ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವಕರಿಗೆ ಎಕ್ಸ್ನಲ್ಲಿ ಬರೆದುಕೊಳ್ಳುವ ಮೂಲಕ ಸಂತಾಪ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. \
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್ಡೇ ನಿಮಿತ್ತ ಬೃಹತ್ ಬ್ಯಾನರ್ ವೊಂದನ್ನು ನಿಲ್ಲಿಸೋದಕ್ಕೆ ಮುಂದಾಗಿದ್ದಾರೆ ಆ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದಾರೆ ಈ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಬದುಕಿ ಬಾಳಬೇಕಿದ್ದ ಹುಡುಗರು ಈ ರೀತಿ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ. ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದಿದ್ದಾರೆ.