ಬೆಂಗಳೂರು : ಕೃಷಿ ಇಲಾಖೆಯಲ್ಲಿ ವರ್ಗಾವಣೆಗೆ ಲಂಚಕ್ಕೆ ಒತ್ತಾಯಿಸಲಾಗಿದೆ ಎಂದು ಕೆಲ ಮಾಧ್ಯಮದಲ್ಲಿ ಮರು ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅಲ್ಲಗೆಳದಿದ್ದಾರೆ.
ನಮ್ಮ ಸರ್ಕಾರದ ಜನಪರ ಆಡಳಿತದ ಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಲೇ ಬಂದಿದ್ದು ಇದು ಹತಾಶಾ ಮನೋಭಾವವಾಗಿದೆ.ಈಗಾಗಲೇ ಈ ಬಗ್ಗೆ ಸ್ಪಷ್ಟೀಕರಣ ನೀಡಲಾಗಿದೆ .
ರಾಜ್ಯಪಾಲರಿಗೆ ಅಧಿಕಾರಿಗಳ ಹೆಸರಿನಲ್ಲಿ ನಕಲಿ ದೂರುಪತ್ರ ಸೃಷ್ಟಿ ಮಾಡಿ ಕಳಿಸಲಾಗಿದೆ.ಉದ್ದೇಶ ಪೂರ್ವಕವಾಗಿ ಕೆಟ್ಟ ಹೆಸರು ತರುವ ಪ್ರಯತ್ನ ಮುಂದುವರೆದಿದೆ .ಹಾಗಾಗಿಯೇ ರಾಜ್ಯಪಾಲರಿಗೆ ನಕಲಿ ಪತ್ರ ಸೃಷ್ಟಿ ಮಾಡಿ ಸಲ್ಲಿಸಲಾಗಿದೆ .ಇದಕ್ಕೆ ಈ ಗಾಗಲೇ ಈ ಬಗ್ಗೆ ಉತ್ತರಿಸಲಾಗಿದೆ ಆದರೂ ಇದು ಹುಸಿ ದೂರು ಎಂಬುದನ್ನು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ.ದೂರಿನ ಬಗ್ಗೆ ಮುಖ್ಯ ಕಾರ್ಯದರ್ಶಿಯವರ ಮೂಲಕ ತನಿಖೆ ಮಾಡಿ ವರದಿ ಪಡೆಯುವಂತೆ ಮುಖ್ಯಮಂತ್ರಿಗಳನ್ನು ಚಲುವರಾಯಸ್ವಾಮಿ ಯವರು ಒತ್ತಾಯಿಸಿದ್ದಾರೆ.