ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ದೇವನಹಳ್ಳಿ ಪಟ್ಟಣದ ಬೈಚಾಪುರ ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಚಲಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿಯಾಗಿ, ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳಕಿಗೆ ಬಂದಿದೆ.
ರೋಗಿಯನ್ನ ಪಿಕಪ್ ಮಾಡಲು ಹೋಗ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದ ಪರಿಣಾಮ ಆ್ಯಂಬುಲೆನ್ಸ್ ಪಲ್ಟಿಯಾಗಿದೆ.
ಈ ವೇಳೆ ಆ್ಯಂಬುಲೆನ್ಸ್ ನಲ್ಲಿದ್ದ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಏರ್ಪೋಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.