ಬೆಂಗಳೂರು : ರಾಜ್ಯದಲ್ಲಿ ಗೋಧ್ರಾ ರೀತಿ ದುರಂತ ನಡೆಯಬಹುದು ಎಂದು ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿಕೆಗೆ ಪರ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಮುನ್ನೆಚ್ಚರಿಕೆ ಕ್ರಮವಾಗಿ ಹರಿಪ್ರಸಾದ್ ಹೇಳಿದ್ದಾರೆ. ಕಮ್ಯುನಲ್ ಘಟನೆ ಆಗಬಾರದು ಎಂದು ಎಚ್ಚರಿಸಿದ್ದಾರೆ. ದೇಶ ಮತ್ತು ರಾಜ್ಯದಲ್ಲಿ ಆಗಬಾರದು . ಅಯೋಧ್ಯೆಗೆ ಬಸ್ , ಟ್ರೈನ್ ನಲ್ಲಿಹೋಗ್ತಾ ಇರ್ತಾರೆ ಆ ಸಂದರ್ಭದಲ್ಲಿ ಆಗಬಹುದು ಎಂಬ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಈ ಬಗ್ಗೆ ಆಯಾ ರಾಜ್ಯಗಳು ನಿಗಾವಹಿಸಬೇಕು ಎಂದಿದ್ದಾರೆ.