ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆಯೇ ವರುಣಾರಾಯನ ಎಂಟ್ರಿ ಕೊಟ್ಟಿದ್ದು, ಜಿಟಿ ಜಿಟಿ ಮಳೆ ಜೊತೆ ಚುಮುಚುಮು ಚಳಿ ಹೆಚ್ಚಾಗಿದೆ, ಉದ್ಯಾನನಗರಿ ಬೆಂಗಳೂರು ಊಟಿಯಂತೆ ಭಾಸವಾಗುತ್ತಿದೆ.
ಕಳೆದ ಎರಡು ದಿನದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನರು ಹೈರಾಣಾಗಿದ್ದಾರೆ. ಮುಂದಿನ 48 ಗಂಟೆಗಳ ಕಾಲ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಕಲಬುರ್ಗಿ ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.