ಬೆಂಗಳೂರು : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆಗೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಮಾಧ್ಯಮದೊಂದಿಗೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಬೆಳಗಾವಿ ಎಂದೂ ಮಹಾರಾಷ್ಟ್ರಕ್ಕೆ ಸೇರಿಲ್ಲ, ಏಕೀಕರಣದ ಸಂದರ್ಭದಲ್ಲಿ ಎಲ್ಲರೂ ಒಂದಾಗಿದ್ದೇವೆ. ಬೆಳಗಾವಿ ಎಂದೆಂದಿಗೂ ಕರ್ನಾಟಕದ್ದೇ ಬಾಂಬೆ ಪ್ರಾವಿನ್ಸ್ ನಲ್ಲಿ ಇತ್ತು . ಹಿಂದೆ ಅದನ್ನು ಯಾರಾದರೂ ತಪ್ಪು ಅರ್ಥ ಮಾಡಿಕೊಂಡಿರಬಹುದು. ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಮಹಾರಾಷ್ಟ್ರ ಕ್ಕೆ ಸೇರಿದ್ದು ಅಂತ ಹೇಳಲು ಸಾಧ್ಯವೇ ಇಲ್ಲ. ಯಾರಾದರೂ ಹಾಗೆ ಹೇಳಿದ್ದರೆ ತಪ್ಪು ಮಾಹಿತಿ ಇರಬಹುದು ಎಂದಿದ್ದಾರೆ.