ನವದೆಹಲಿ: ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಕಪ್ಪುಚುಕ್ಕೆ ಬಾರದಂತೆ ನೋಡಿಕೊಳ್ಳಿವಂತೆ ಸಚಿವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪಾರದರ್ಶಕ ಆಡಳಿತ ನೀಡಬೇಕು, ಹೈಕಮಾಂಡ್ ನಿಗಾ ವಹಿಸಲಿದೆ. ಭ್ರಷ್ಟಾಚಾರ ವಿಚಾರದಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡಿದ್ದೇವೆ. ಭ್ರಷ್ಟಾಚಾರ ಆರೋಪ ಕಾಂಗ್ರೆಸ್ ಸರ್ಕಾರದ ವಿರುದ್ಧ ಬರಬಾರದು ಎಂದಿದ್ದಾರೆ.
ವರ್ಗಾವಣೆ ವಿಚಾರದಲ್ಲಿ ಕೇಳಿ ಬಂದ ಲಂಚ ಆರೋಪದ ಹಿನ್ನೆಲೆಯಲ್ಲಿ ಹೈಕಮಾಂಡ್ ಕೆರಳಿದೆ. ಈ ರೀತಿ ಪಕ್ಷ ಹಾಗೂ ಸರಕಾರದ ವರ್ಚಸ್ಸಿಗೆ ಭಂಗ ತರುವ ಯಾವುದೇ ಬೆಳವಣಿಗೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತದ ವಾಗ್ದಾನ ಮಾಡಿ ಗೆದ್ದು ಬಂದಿರುವ ಪಕ್ಷವೇ ತನ್ನ ಸರಕಾರದಲ್ಲಿಇಂಥ ಆರೋಪಗಳಿಗೆ ಆಸ್ಪದ ಒದಗಿಸಿದರೆ ಹೇಗೆ? ಭ್ರಷ್ಟಾಚಾರವನ್ನು ಸಹಿಸಲಾಗದು ಎಂದು ರಾಹುಲ್ ಸಿಡಿಮಿಡಿಗೊಂಡಿದ್ದಾರೆ.