ಕೊಪ್ಪಳ : ಸೋಷಿಯಲ್ ಮೀಡಿಯಾ(Social Media)ದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ (Koppal Deputy Commissioner) ಹೆಸರಲ್ಲಿ ನಕಲಿ ಖಾತೆ ತೆರೆದು ವಂಚಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಬ್ಯ್ಲಾಕ್ ಮೇಲ್‌ಗಳ ಹಾವಳಿ ಹೆಚ್ಚಾಗಿದ್ದು, ಇದೀಗ ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ನಕಲಿ ಫೇಸ್ಬುಕ್ನಲ್ಲಿ ಅಕೌಂಟ್ ತೆರೆಯಾಗಿದೆ, ಅಲ್ಲದೇ ಅಕೌಂಟ್ಗೆ ಜಿಲ್ಲಾಧಿಕಾರಿಗಳ ಭಾವಚಿತ್ರ ಡಿಪಿ ಇಟ್ಟು ಫ್ರೆಂಡ್ ರಿಕ್ವೆಸ್ಟ್ ಕಳಿಸುತ್ತಿದ್ದರು. ಈ ವಿಚಾರ ತಿಳಿದ ಜಿಲ್ಲಾಧಿಕಾರಿ ಎಂ.ಸುಂದರೇಶ ಪ್ರತಿಕ್ರಿಯೆ ನೀಡಬಾರದೆಂದು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.