ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(AICC president Mallikarjun Kharge) ಮೈಬಣ್ಣ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಗ ಜ್ಞಾನೇಂದ್ರ(Araga Jnanendra) ದೂರು ದಾಖಲಿಸಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಈಶ್ವರ್ ಖಂಡ್ರೆ ಅವರ ವಿಚಾರವಾಗಿ ಆರಗ ಜ್ಞಾನೇಂದ್ರ ಮಾತನಾಡಿದ ವಿಚಾರ ಇದೀಗ ರಾಜ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಅಲ್ಲದೇ ಈ ಮಾತಿನಿಂದ ಕಾಂಗ್ರೆಸ್ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ ಈ ಬೆನ್ನಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಲಿತ ಮುಖಂಡ ಹರ್ಷೇಂದ್ರ ಕುಮಾರ್ ಎನ್ನುವರು ಆರಗ ಜ್ಞಾನೇಂದ್ರ ವಿರುದ್ಧ ಜಾತಿ ನಿಂದನೆ ದೂರು ನೀಡಲಾಗಿದೆ