ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು 2023-24ನೇ ಸಾಲಿನ ಎಸ್.ಸಿ.ಎಸ್.ಪಿ./ ಟಿ.ಎಸ್.ಪಿ. ಕ್ರಿಯಾ ಯೋಜನೆ ಅನುಮೋದಿಸುವ ಕುರಿತ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಸದಸ್ಯರಾದ ಸಚಿವರುಗಳಾದ ನಾಗೇಂದ್ರ, ಹೆಚ್.ಕೆ. ಪಾಟೀಲ್, ಪ್ರಿಯಾಂಕ್ ಖರ್ಗೆ, ಎಂ.ಸಿ. ಸುಧಾಕರ್, ರಾಜ್ಯ ಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಪ್ರಸಾದ ಅಬ್ಬಯ್ಯ, ಇ. ತುಕಾರಾಂ, ಪ್ರಕಾಶ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
0 1 Less than a minute