ಚಿತ್ರದುರ್ಗ: ಜಿಲ್ಲೆಯ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕ ಸ್ಪಂದಿಸಿದ್ದಾರೆ ಎಂದು ಸಚಿವ ಡಿ.ಸುಧಾಕರ್ ( Minister D Sudhakar)ಪತ್ರಿಕ್ರಿಯಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆಯ ಬಳಿಕ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ನಾವೆಲ್ಲ ಒಟ್ಟಿಗೆ ಇದ್ದೇವೆ. ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಜಿಲ್ಲೆ ಮತ್ತು ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿದ್ದೇವೆ. ಸಿಎಂ ಸಕಾರಾತ್ಮಕ ಸ್ಪಂದಿಸಿದ್ದಾರೆ ಎಂದಿದ್ದಾರೆ.
ನಮ್ಮ ಜಿಲ್ಲೆಯಲ್ಲಿ ಯಾವ ಶಾಸಕರು ಪತ್ರ ಬರೆದಿಲ್ಲ . ನಮ್ಮ ಜಿಲ್ಲೆಯ 5 ಶಾಸಕರು ಒಟ್ಟಾಗಿದ್ದೇವೆ. 7 ತಿಂಗಳಿಗೆ ಎಷ್ಟು ಆಗುತ್ತೋ ಅಷ್ಟು ಅನುದಾನ ಕೊಟ್ಟಿದ್ದಾರೆ. ನೆಕ್ಟ್ ಬಜೆಟ್‌ನಲ್ಲಿ ಜಾಸ್ತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಮೈನಿಂಗ್ ಇರೋದ್ರಿಂದ ಸ್ಪೆಷಲ್ ಅನುದಾನ ಲಭ್ಯವಾಗಬಹುದು ಎಂದಿದ್ದಾರೆ.
ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರಿನ ಬಗ್ಗೆ ಸಿಎಂ ಉತ್ತರ ಕೊಡುತ್ತಾರೆ. ನನಗೆ ಅದರ ಬಗ್ಗೆ ಗೊತ್ತಿಲ್ಲ, ನೋಡಿ ಹೇಳ್ತೀನಿ ಎಂದು ಸಚಿವ ಡಿ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ,