ಬೆಂಗಳೂರು: ರಾಯಚೂರು ಜಿಲ್ಲೆಯ ಸಚಿವರು ಮತ್ತು ಶಾಸಕರೊಂದಿಗೆ ಲೋಕಸಭೆ ಚುನಾವಣೆ ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ.
ಇಂದು ರಾಯಚೂರು ಜಿಲ್ಲೆಯ ಸಚಿವರು ಮತ್ತು ಶಾಸಕರುಗಳ ಜತೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಚರ್ಚಿಸಿದರು. ಆಯಾ ಕ್ಷೇತ್ರಗಳ ಅಭಿವೃದ್ಧಿ , ಅನುದಾನ ಮತ್ತು ಲೋಕಸಭಾ ಚುನಾವಣೆ ಸಿದ್ದತೆ ಕುರಿತು ಚರ್ಚಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಬೋಸರಾಜು, ಶಾಸಕರಾದ ಶರಣ್ ಪ್ರಕಾಶ್ ಪಾಟೀಲ್, ಬಸವರಾಜ ದದ್ದಾಲ್ ಸೇರಿ ಹಲವು ಶಾಸಕರು ಭಾಗಿಯಾಗಿದ್ದರು.