ಬೆಂಗಳೂರು : 76ನೇ ಸ್ವಾತಂತ್ರ್ಯ ದಿನಾಚರಣೆ (76th Independence Day) ಪ್ರಯುಕ್ತ 214ನೇ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ(Fruit Flower Show)ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಸ್ಮರಣಾರ್ಥ ಈ ಬಾರಿ ಫಲಪುಷ್ಪ ಅನಾವರಣಗೊಂಡಿದೆ, ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿ ಅನೇಕ ಗಣ್ಯರ ಭಾಗಿಯಾಗಿದ್ದಾರೆ. ಸುಮಾರು 2.50 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲವರ್ ಶೋ ಆಯೋಜನೆ ಮಾಡಲಾಗಿದೆ.
12 ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಗಣ್ಯರು, ಸಾರ್ವಜನಿಕರು, ವಿದೇಶಿ ಪ್ರವಾಸಿಗರು ಹಾಗೂ ಶಾಲಾ ಮಕ್ಕಳೂ ಸೇರಿದಂತೆ ಸುಮಾರು 10 ಲಕ್ಷ ಜನ ಬರುವ ನಿರೀಕ್ಷೆಯಿದೆ. ಇದರಿಂದ ಲಾಲ್‌ಬಾಗ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿ ಸಂಚಾರಕ್ಕೆ ಅಡ್ಡಿಯಾಗುವ ಸಾಧ್ಯತೆಯಿದೆ.