ಕಲಬುರಗಿ : ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಗೃಹ ಜ್ಯೋತಿ ಯೋಜನೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದ್ದಾರೆ.
ಉಚಿತ ಬೆಳಕು ಸುಸ್ಥಿರ ಬದುಕು ಅನ್ನೋ ಘೋಷವಾಕ್ಯದೊಂದಿಗೆ ಗೃಹ ಜ್ಯೋತಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಸಾರ್ವಜನಿಕರು ಭಾಗಿಯಾಗಿದ್ದಾರೆ. ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮೀ ಯೋಜನೆ ಸಾಂಕೇತಿಕವಾಗಿ ಜಿರೋ ಬಿಲ್‌ಗಳನ್ನು 10 ಜನರಿಗೆ ವಿತರಣೆ ಮಾಡುವ ಮೂಲಕ ಚಾಲನೆ ನೀಡಲಾಯಿತು.