ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಬಳಿ ಮೊದಲ ಬಾರಿಗೆ ಆಗಸ್ಟ್ 3ರಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ.
ಭಾರತೀಯ ಆಹಾರ ನಿಗಮ (FCI) ರಾಜ್ಯಕ್ಕೆ ಅಕ್ಕಿ ನಿರಾಕರಿಸುವುದು ಸೇರಿದಂತೆ ಇತರೆ ಅನುದಾನ ಕೊಡುವ ವಿಚಾರದಲ್ಲಿ ಮಾತುಕತೆ ಪ್ರಧಾನಿ ಮೋದಿಯೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ.
ಅಂದೇ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ನಾಳೆ ಸಿಎಂ ಸಿದ್ದರಾಮಯ್ಯ ತೆರಳಿದ್ದಾರೆ. ಬಳಿಕ ಪ್ರಧಾನಿಗಳ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ.