ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ(CM Siddaramaiah) ಉಡುಪಿ (Udupi)ಮತ್ತು ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮಳೆ ಹಾನಿ ಪ್ರದೇಶಗಳಿಗೆ ಪರಿಶೀಲನೆ ಹಿನ್ನೆಲೆ ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಮಂಗಳೂರು ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳಿ ಮಧ್ಯಾಹ್ನ 12.30ಕ್ಕೆ ಉಡುಪಿ ಡಿಸಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ಮಂಗಳೂರಿಗೆ ತೆರಳಿ ಸಂಜೆ 4.15ಕ್ಕೆ ಮಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಕರಾವಳಿ ಭಾಗಕ್ಕೆ ಸಿಎಂ ಸಿದ್ದರಾಮಯ್ಯ ಪ್ರವಾಸ ಹಿನ್ನೆಲೆ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ. ಪ್ರತಿಭಟನೆ ನಡೆಸಿ ಉಡುಪಿ ಕಾಲೇಜಿನ ಪ್ರಕರಣ ಮೂವರು ಆರೋಪಿಗಳಿಗೆ ಕ್ರಮ ಕೈಗೊಳ್ಳಲು ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ಇನ್ನು ಈ ಪ್ರಕರಣ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯುವ ಸಾಧ್ಯತೆಯಿದೆ.