ಬೆಂಗಳೂರು : ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರ ವಿರುದ್ಧ ಲಂಚದ ಸುಳ್ಳು ಆರೋಪ ಮಾಡಿ ಅವರ ಹಾಗೂ ಕಾಂಗ್ರೆಸ್ ಪಕ್ಷದ ತೇಜೋವಧೆಗೆ ಕೆಲವರು ಪ್ರಯತ್ನ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸಿದವರನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷರು, ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ, ಮಾಜಿ ಮೇಯರ್‌ಗಳು ಹಾಗೂ ಹಾಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಹುಚ್ಚಪ್ಪ, ರಾಮಚಂದ್ರಪ್ಪ, ಕೆಪಿಸಿಸಿ ಮಾಧ್ಯಮ ವಿಭಾಗ ಉಪಾಧ್ಯಕ್ಷರು, ವಿಧಾನ ಪರಿಷತ್ ಮಾಜಿ ಶಾಸಕರಾದ ರಮೇಶ್ ಬಾಬು, ಶಾಸಕರಾದ ದಿನೇಶ್ ಗೂಳಿಗೌಡ ಮತ್ತು ಕೆಪಿಸಿಸಿ ಮಾಧ್ಯಮ ಸಂಯೋಜಕರಾದ ಜಿ. ಸಿ ರಾಜು ಅವರುಗಳು ಗೃಹ ಸಚಿವರಾದ ಡಾ. ಜಿ. ಪರಮೇಶವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ವರದಿ : ಬಸವರಾಜ ಹೂಗಾರ