ಬೆಂಗಳೂರು : ಖಾಸಗಿ ಹೋಟೆಲ್‌ನಲ್ಲಿ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ, ಸಿಎಂ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ತುರ್ತು ಸಿಎಲ್‌ಪಿ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಪರಿಷತ್ ಸಭಾ ನಾಯಕ ಎನ್.ಎಸ್.ಬೋಸರಾಜು ಹಾಗೂ ಸಚಿವರು ಸೇರಿದಂತೆ ಕಾಂಗ್ರೆಸ್‌ನ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ.
ಇಂದು ನಡೆಯುವ ಸಭೆ ಮಹತ್ವದಾಗಿದ್ದು, ಈಗಾಗಲೇ ಸಚಿವರ ವಿರುದ್ದ ಶಾಸಕರು ಅಸಮಾಧಾನ ವ್ಯಕ್ತಪಡಿಸಿ, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.