ಬೆಂಗಳೂರು : 250 ಕೋಟಿ ಕಲೆಕ್ಷನ್ ಮಾಡಲು ಬಿಡಿಎಗೆ ಸರ್ಕಾರ ಟಾರ್ಗೆಟ್ ನೀಡಿದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಈಸ್ಟ್ ಇಂಡಿಯಾ ಪಕ್ಷದಂತೆ ರಾಜ್ಯವನ್ನು ಲೂಟಿ ಮಾಡುತ್ತಿದೆ. ಪೊಲೀಸ್ ವರ್ಗಾವಣೆಯಲ್ಲಿ ವೈಎಸ್ ಟಿ ದಂಧೆಕೋರರು ಶಾಮೀಲಾಗಿದ್ದಾರೆ, ಬಿಡಿಎ ಅಧಿಕಾರಿಗಳಿಂದ 250 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಲಾಗಿದೆ. ರಾಜ್ಯದಲ್ಲಿ ಪರ್ಸೆಂಟೇಜ್ ಸಂಗ್ರಹ ಅವ್ಯಾಹತವಾಗಿ ನಡೆಯುತ್ತಿದೆ ಎಂದು ದೂರಿದ್ಧಾರೆ.
ಸಚಿವರೊಬ್ಬರು ನೇರವಾಗಿ ಗುತ್ತಿಗೆದಾರರಿಂದ ಕಮೀಷನ್ ಡಿಮ್ಯಾಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಆ ಸಚಿವರನ್ನು ಭೇಟಿಯಾಗಲು ಹೋಗಿದ್ದ ಗುತ್ತಿಗೆದಾರರಿಗೆ, ಹಣ ತಂದಿದ್ದರೆ ಒಳಕ್ಕೆ ಬನ್ನಿ. ಇಲ್ಲವಾದರೆ ಹೊರಗೆ ಇರಿ ಎಂದು ಆ ಸಚಿವರ ಚೇಲಾಗಳು ತಾಕೀತು ಮಾಡಿದ್ದಾರೆ. ಇವರು ಹೋಗಿ ದೆಹಲಿಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಅವರಿಗೆ ಹೇಳುತ್ತಾರೆ. ಇಂಥವರಿಂದ ರಾಜ್ಯದ ಉದ್ಧಾರ ಸಾಧ್ಯವೇ? ಪಾರದರ್ಶಕ ಆಡಳಿತ ನೀಡಲು ಆಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.