ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ ನೀಡಿದ್ದಾರೆ. ಇದೇ ವಿಚಾರವಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಘಟನೆಗೆ ಯಾರೇ ಕಾರಣರಾಗಿದ್ದರೂ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.
0 0 Less than a minute