ಬೆಂಗಳೂರು : ಸರ್ಕಾರದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ? ಎಂದು ಹತ್ಯೆಯಾದ ಉಪ ನಿರ್ದೇಶಕಿ ಪ್ರತಿಮಾ (Prathima) ಅವರ ಸಹೋದರ ಬೇಸರ ಹೊರ ಹಾಕಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿ ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಸಹೋದರ ಮಾತನಾಡಿದ ಅವರು, ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ತೀರ್ಥಹಳ್ಳಿ ಮೂಲದವರಾಗಿದ್ದು, ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ ಅವರನ್ನು ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಕಳೆದ 8 ವರ್ಷಗಳಿಂದ ಅದೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪೂರ್ಣಿಮಾ ಕಳೆದ ರಾತ್ರಿ ಮನೆತಲ್ಲಿ ಒಬ್ಬರೇ ಇದ್ದರು. ರಾತ್ರಿ 8 ಗಂಟೆ ವೇಳೆಗೆ ಅವರನ್ನು ಡ್ರೈವರ್ ಕಚೇರಿಯಿಂದ ಮನೆಗೆ ಬಿಟ್ಟು ಬಂದಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಪ್ರತಿಮಾ ಸಹೋದರ ಕರೆ ಮಾಡಿದರೂ ಅದನ್ನು ಸ್ವೀಕರಿಸಿರಲಿಲ್ಲ. ಬಳಿಕ ಫ್ಲ್ಯಾಟ್ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.