ಕಲಬುರ್ಗಿ: ಇಂದು ಕಲ್ಬುರ್ಗಿಯಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಇಂದು(ಆ.5) ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಖರ್ಗೆ ಚಾಲನೆ ನೀಡಿದ್ದಾರೆ. ಇಂದು ಚಾಲನೆ ನೀಡಿದ ಈ ಬೆನ್ನಲ್ಲೆ ಕಾರ್ಯಕ್ರಮವನ್ನು ಉದ್ದೇಶಿಸಿ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲಮಾತನಾಡಿದ್ದಾರೆ.
“ಸರ್ಕಾರದ ಬೊಕ್ಕಸದ ಬಹುಪಾಲನ್ನು ಬಡಜನರಿಗೆ ತಲುಪಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಮಾತಿನಂತೆ ನಡೆಯುವ ಕೆಲಸ ಮಾಡುತ್ತಿದ್ದೇವೆ. ಐದು ಗ್ಯಾರಂಟಿಗಳ ಜತೆ ಪಾರದರ್ಶಕ ಆಡಳಿತ ನಾವು ಕೊಡುತ್ತೇವೆ. ಕರ್ನಾಟಕದ ಅಭಿವೃದ್ಧಿಯೇ ನಮ್ಮ ವಾಗ್ದಾನ,” ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ ಹೇಳಿದರು