ಬೆಂಗಳೂರು : ಆಗಸ್ಟ್ 07 ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದ್ದು, 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದೂರು ನೀಡಿದ್ದಾರೆ.
ಮಂಡ್ಯ, ಮಳ್ಳವಳ್ಳಿ, ಕೆ.ಆರ್. ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವರ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಆತ್ಮ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರಿನ ಜೊತೆಗಿನ ಪತ್ರದಲ್ಲಿ ಹೇಳಿದ್ದಾರೆ.
ರಾಜ್ಯಪಾಲರ ಕಚೇರಿಯಿಂದ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದ ಪತ್ರದಲ್ಲಿ “ಮಾನ್ಯ ರಾಜ್ಯಪಾಲರವರಿಗೆ ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಮತ್ತು ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿ ಉಲ್ಲೇಖಿತ ದೂರರ್ಜಿಯನ್ನು ಸಲ್ಲಿಸಿರುತ್ತಾರೆ. ದೂರರ್ಜಿಯಲ್ಲಿ ಮೇಲಿನ ಅಧಿಕಾರಿಗಳು ಉಲ್ಲೇಖಿಸಿರುವಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ 6-8 ಲಕ್ಷ ರೂಪಾಯಿಗಳನ್ನು ನೀಡುವಂತೆ ಮಾನ್ಯ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿರುತ್ತಾರೆ.
ಲಂಚ ಕೇಳುವ ಇಂತಹ ಅನಿಷ್ಠ ಪದ್ಧತಿಗೆ ಕಡಿವಾಣ ಹಾಕುವ ಸಂಬಂಧ ಕ್ರಮ ವಹಿಸದಿದ್ದಲ್ಲಿ ಅಧಿಕಾರಿಗಳು ಕುಟುಂಬದ ಸದಸ್ಯರ ಜೊತೆಗೆ ವಿಷ ಕುಡಿಯುವುದಾಗಿ ತಿಳಿಸಿರುತ್ತಾರೆ. ಈ ದೂರರ್ಜಿಯನ್ನು ನಿಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮ ವಹಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಿದ್ದೇನೆ ಎಂದು ಉಲ್ಲೇಖಿಸಲಾಗಿದೆ.
ಸಚಿವ ಚೆಲುವರಾಯಸ್ವಾಮಿ ವಿರುದ್ಧವಾಗಿ ಯಾರೋ ರಾಜ್ಯಪಾಲರಿಗೆ ಬರೆದಿರುವ ಪತ್ರ ನಕಲಿ ಇದು, ಅಧಿಕಾರಿಗಳು ನಾವು ಯಾರು ಪತ್ರ ಬರೆದಿಲ್ಲ ಅಂತ ಹೇಳಿದ್ದಾರೆ. ಎಸ್ಪಿ ಜೊತೆಗೆ ಮಾತಾಡಿ ನಾನು ವರದಿ ತರೆಸಿಕೊಳ್ತಿನಿ . ಅಧಿಕಾರಿಗಳು ನಾವು ಯಾರು ಪತ್ರ ಬರೆದಿಲ್ಲ ಎಂದು ದೂರು ನೀಡಿದ್ದಾರಂತೆ. ನಕಲಿ ಪತ್ರ ಹೆಚ್ಚಾಗಿರುವ ಈ ಹಿನ್ನೆಲೆಯಲ್ಲಿ ಐಟಿ , ಗೃಹಗಳ ಇಲಾಖೆ ಕಠಿಣ ಕಾನೂನು ತರುವ ಬಗ್ಗೆ ಸಿಎಂ ಜೊತೆಗೆ ಚರ್ಚೆ ಮಾಡಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡುತ್ತೆವೆ ಎಂದು ಗೃಹ ಸಚಿವ ಪರವೇಶ್ವರ್ ಹೇಳೀಕೆ ನೀಡಿದ್ದಾರೆ.