ಬೆಂಗಳೂರು : ವಿಧಾನಸಭೆ ಅಧಿವೇಶನ ಮುಗಿದ ಬೆನ್ನಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಹತ್ತು ದಿನಗಳ ಕಾಲ ಯುರೋಪ್ ರಾಷ್ಟ್ರ ಪ್ರವಾಸ ಕೈಗೊಂಡಿದ್ದಾರೆ.
ಹೆಚ್‌ಡಿ ಕುಮಾರಸ್ವಾಮಿ ಜತೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಸದಸ್ಯರೆಲ್ಲರೂ ಹತ್ತು ದಿನಗಳ ಕಾಲ ಯೂರೋಪ್ ಪ್ರವಾಸ ಕೈಗೊಂಡಿದ್ದಾರೆ.
ಯುರೋಪ್ ರಾಷ್ಟ್ರ ಪ್ರವಾಸ ಬಳಿಕ ಆಗಸ್ಟ್ 2ರಂದು ಬೆಂಗಳೂರು ನಗರಕ್ಕೆ ಮರಳಲಿದೆ. ಬಳಿಕ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳ ಸಿದ್ಧತೆ ಮಹತ್ವದ ಸಭೆ ನಡೆಸುವ ಸಾಧ್ಯತೆಯಿದೆ.