ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕೋದಕ್ಕಾಗಿ ಇದೀಗ ಹೆದ್ದಾರಿ ಪ್ರಾಧಿಕಾರ ಹೊಸ ರೂಲ್ಸ್ ಜಾರಿ ತಂದಿದ್ದು, ಇಂದಿನಿಂದ ಎಕ್ಸ್‌ಪ್ರೆಸ್ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸಂಚಾರಕ್ಕೆ ಅವಕಾಶ ಕೊಟ್ಟಿದ್ದೆ ತಡ 2-3 ತಿಂಗಳಿನಲ್ಲಿ ಭಾರೀ ಅಫಘಾತಗಳು ಸಂಭವಿಸಿತ್ತು. ಈ ಘಟನೆ ಬಳಿಕ ಹೆದ್ದಾರಿ ಪ್ರಾಧಿಕಾರ ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದಾಗ ಕೆಲವೊಂದು ವಿಚಾರಗಳು ಬೆಳಕಿಗೆ ಬಂದಿದೆ. ಅದರಲ್ಲೂ ಬೈಕ್ ಹಾಗೂ ಮೂರು ಚಕ್ರದ ವಾಹನಗಳಿಂದ ಅಪಘಾತ ಸಂಖ್ಯೆ ಹೆಚ್ಚಳ ಎಂದು ಮಾಹಿತಿ ಬಹಿರಂಗವಾಗಿದೆ.
ಈ ನಿಟ್ಟಿನಲ್ಲಿ ಇದೀಗ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕೋದಕ್ಕಾಗಿ ಇದೀಗ ಹೆದ್ದಾರಿ ಪ್ರಾಧಿಕಾರ ಹೊಸ ರೂಲ್ಸ್ ಜಾರಿಗೆ ತರಲಾಗಿದೆ. ಅಲ್ಲದೇ ಇಂದಿನಿಂದ ಎಕ್ಸ್‌ಪ್ರೆಸ್ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶವಿಲ್ಲ ಎಂದು ಸೂಚನೆ ನೀಡಲಾಗಿದೆ. ಅಪ್ಪಿತಪ್ಪಿಯೂ ರೂಲ್ಸ್ ಬ್ರೇಕ್ ಮಾಡಿದಲ್ಲಿ 500 ರೂಪಾಯಿ ದಂಡ ಬೀಳಲಿದೆ. ಈಗಾಗಲೇ ದಶಪಥ ಹೆದ್ದಾರಿಯಲ್ಲಿ ನಿಯಮ ಉಲ್ಲಂಘನೆಯನ್ನು ಪರಿಶೀಲನೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಅಷ್ಟೇ ಅಲ್ಲದೇ ನಿರ್ಬಂಧಿಸಲಾದ ವಾಹನಗಳು ಹೆದ್ದಾರಿಯಲ್ಲಿ ಸಂಚರಿಸಿ ಅಪಘಾತವಾದರೆ ವಿಮೆ ಅನ್ವಯ ಆಗಲ್ಲ. ರಾಮನಗರ ವ್ಯಾಪ್ತಿಯ 9 ಎಂಟ್ರಿ, ಎಕ್ಸಿಟ್‌ಗಳಲ್ಲೂ ಪೊಲೀಸರು ತಪಾಸಣೆ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ದಶಪಥ ಹೆದ್ದರಿಗೆ ಎಂಟ್ರಿ ಕೊಡುವ ಮುನ್ನ ಈ ಹೊಸ ರೂಲ್ಸ್‌ಗಳನ್ನು ತಿಳಿದು ಕೊಳ್ಳುವುದು ಸೂಕ್ತ ಕೊಂಚ ಯಾಮಾರಿದ್ರೂ, ದುಬಾರಿ ದಂಡವನ್ನು ಪಾವತಿ ಮಾಡಬೇಕಾಗಿದೆ.