ಕೊಪ್ಪಳ : ಇಂದು ಅಧಿಕ ಮಾಸದ ಹುಣ್ಣಿಮೆ ಆಚರಣೆ ಹಿನ್ನೆಲೆ ಕೊಪ್ಪಳ ತಾಲೂಕಿನ ಹುಲಗಿಯಲ್ಲಿರೋ ಪುರಾಣ ಪ್ರಸಿದ್ದ ಹುಲಿಗೆಮ್ಮ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರವೇ ಹರಿದು ಬರುತ್ತಿದೆ.
ಶ್ರಾವಣ ಅಧಿಕ ಮಾಸದ ಹುಣ್ಣಿಮೆ ದಿನವಾದ ಇಂದು ಬಹುತೇಕ ಎಲ್ಲಾ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೊಪ್ಪಳ ತಾಲೂಕಿನ ಹುಲಗಿಯಲ್ಲಿರೋ ಪುರಾಣ ಪ್ರಸಿದ್ದ ಹುಲಿಗೆಮ್ಮ ದೇವಸ್ಥಾನದಲ್ಲಿ ಭಾರೀ ಸಂಭ್ರಮ ಸಡಗರ ಮನೆ ಮಾಡಿದ್ದು, ಭಕ್ತಾಧಿಗಳು ಬೆಳಗ್ಗಿನಿಂದಲೇ ದೇವರ ದರ್ಶನಕ್ಕೆ ಆಗಮಿಸುತ್ತಿದ್ದಾರೆ. . ಹುಲಿಗೆಮ್ಮ ದೇವಸ್ಥಾನದ ಎದುರು ಸರದಿ ಸಾಲಿನಲ್ಲಿ ನಿಂತೂ ಭಕ್ತದ ದರ್ಶನಕ್ಕೆ ಕಾಯುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಜನರಲ್ಲದೇ ,ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ಮಹಾರಾಷ್ಟ್ರದಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ವರದಿಯಾಗಿದೆ.