ಬೆಂಗಳೂರು : ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಲವು ದಿನಗಳಿಂದ ಹೋರಾಟ ಮಾಡುತ್ತಿದ್ದ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ಬೆಂಗಳೂರು ಚಲೋ ಪಾದಯಾತ್ರೆ ಆರಂಭಿಸಿದ್ದು, ಇಂದು ಬೆಂಗಳೂರು ತಲುಪಿದ್ದಾರೆ.
ತುಮಕೂರಿನಿಂದ ಅತಿಥಿ ಉಪನ್ಯಾಸಕರು ಪಾದಯಾತ್ರೆ ಕೈಗೊಂಡಿದ್ದು, ಇದೀಗ ಪ್ರೀಡಂಪಾರ್ಕ್ ನತ್ತ ಅತಿಥಿ ಉಪನ್ಯಾಸಕರ ಪಾದಯಾತ್ರೆ ಮಾಡುತ್ತ ತಲುಪಿದ್ದಾರೆ. ಕಳೆದ ಒಂದು ತಿಂಗಳಿನಿಂದ ಪದವಿ ತರಗತಿಗಳನ್ನ ಉಪನ್ಯಾಸಕರು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು. ಇಲ್ಲಿಯವರೆಗೂ ಜಿಲ್ಲಾ ಹಂತದಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿತ್ತು. ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಸರ್ಕಾರ ನಡೆಸಿದ ಮಾತುಕತೆ ವಿಫಲ ಹಿನ್ನೆಲೆ ಇಂದು ಸರ್ಕಾರದ ವಿರುದ್ಧ ಪ್ರೀಡಂಪಾರ್ಕ್ ನಲ್ಲಿ ಬೃಹತ್ ಮಟ್ಟದಲ್ಲಿ ಪ್ರತಿಭಟನೆ ನಡೆಸೋದಕ್ಕೆ ಮುಂದಾಗಿದ್ದಾರೆ.