ಬೆಂಗಳೂರು : ಕರ್ನಾಟಕದಲ್ಲಿ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಮೊದಲ ತಿಂಗಳೇ ನೌಕರರಿಗೆ ಬರೆ ಹಾಕಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Former CM Basavaraj Bommai) ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಶಕ್ತಿ ಯೋಜನೆ ಫಲಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ. ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ. ಬರುವಂತ ದಿನಗಳಲ್ಲಿ ಸಾರಿಗೆ ನಿಗಮಗಳು ಬಸ್ ಗಳನ್ನು ಡಿಸೆಲ್ ಇಲ್ಲದೆ ನಿಲ್ಲಿಸುವಂತದ್ದು ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತದ್ದು, ಕೆಟ್ಟ ಬಸ್ ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ ಎಂದು ಟ್ವೀಟ್ ಮೂಲಕ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ