ಬೆಂಗಳೂರು : ಶಾಸಕ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭ್ರಷ್ಟಾಚಾರದ ಮೂಲಕ ಮುಖ್ಯಮಂತ್ರಿಗಳು, ಸಚಿವರು ಎಲ್ಲಾ ಭಾಗ್ಯಗಳನ್ನು ಜಾರಿಗೊಳಿಸಿದ್ದಾರೆ.
ವೈಎಸ್‌ಟಿ(YST), ಎಸ್‌ಎಸ್‌ಟಿ (SST) ಅಂತ ಅಲ್ಲ. ಎಲ್ಲರೂ ವರ್ಗಾವಣೆ ದಂಧೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಪ್ರತ್ಯೇಕವಾಗಿ ಒಬ್ಬ ವ್ಯಕ್ತಿ ಅಂತ ಅಲ್ಲ, ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ” ಎಂದು ಕಿಡಿಕಾರಿದ್ದಾರು .