ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಖಂಡಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ” ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ ಇದು ನಾಚಿಕೆಗೇಡು” ಎಂದು ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿ ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ಇವತ್ತು ಅಯೋಧ್ಯೆ ಉದ್ಘಾಟನೆ ಬಗ್ಗೆ ದೇಶದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಸರ್ಕಾರಕ್ಕೆ ಇದ್ಯಾವುದರ ಕಾಳಜಿ ಇಲ್ಲ. ಇಂತಹ ವಿಷಯ ಮುನ್ನಲೆಗೆ ತಂದು ವಿಷಯ ಡೈವರ್ಟ್ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣ ದೊಡ್ಡದು ಮಾಡಿದ್ದಾರೆ. ಎಲ್ಲಾ ಕೇಸ್ ಖುಲಾಸೆ ಆಗಿದೆ. ಮಾಧ್ಯಮಗಳೇ ಇದನ್ನ ತೋರಿಸಿವೆ ಎಂದಿದ್ದಾರೆ.
ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ. ಈದ್ಗಾ ಮೈದಾನದಲ್ಲಿ ಗಲಾಟೆ ಆಗಿದ್ದಾಗ ದೇವೇಗೌಡರು ಹೇಗೆ ನಿಭಾಯಿಸಿದರು ಅಂತಾ ಗೊತ್ತಿದೆ. ಈ ಸರ್ಕಾರ ವಿರೋಧಿಗಳ ಮೇಲೆ ದಬ್ಬಾಳಿಕೆ ಮಾಡೋ ಕೆಲಸ ಮಾಡ್ತಿದೆ. ಪ್ರತಾಪ್ ಸಿಂಹ ಸಹೋದರನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ. ಕಾಂಗ್ರೆಸ್ ಅವರು ವಿರೋಧಿಗಳ ಧ್ವನಿ ಅಡಗಿಸೋಕೆ ಅಧಿಕಾರ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಕರಸೇವಕರ ಮೇಲೆ ದೌರ್ಜನ್ಯ. ಇದು ನಾಚಿಕೆಗೇಡು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.