ಬೆಂಗಳೂರು ; ಜೆಟ್ ಲಾಗ್ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧಿಸಿ 8 ಮಂದಿಗೆ ಸುಬ್ರಮಣ್ಯ ನಗರ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಜೆಟ್ ಲಾಗ್ ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧಿಸಿ ನಟ ದರ್ಶನ್ , ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ , ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟ ನೀನಾಸಂ ಸತೀಶ್, ಡಾಲಿ ಧನಂಜಯ್, ಅಭಿಶೇಕ್ ಅಂಬರೀಷ್ ಹಾಗೂ ಚಿಕ್ಕಣ್ಣ ಗೆ ನೋಟಿಸ್ ನೀಡಿದ್ದಾರೆ.
ಈ ನೋಟಿಸ್ ತಲುಪಿದ ಕೂಡಲೇ ವಿಚಾರಣೆಗೆ ಸುಬ್ರಮಣ್ಯಪುರ ಠಾಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸದ್ಯ ನೋಟೀಸ್ ಗೆ ಇದುವರೆಗೂ ಯಾವುದೇ ಉತ್ತರ ಬಂದಿಲ್ಲ. ಸದ್ಯ ನೋಟಿಸ್ ಕೊಟ್ಟಿರುವ ಬಹುತೇಕರು ದುಬೈನಲ್ಲಿರುವ ಕುರಿತು ಮಾಹಿತಿ ತಿಳಿದುಬಂದಿದೆ.