ಬೆಂಗಳೂರು : ಇಂದು ಪ್ರಧಾನಿ ನರೇಂದ್ರ ಮೋದಿ( Prime Minister Narendra Modi) ಭೇಟಿಯಾದ ಸಿಎಂ ಸಿದ್ದರಾಮಯ್ಯ (CM Siddaramaiah), ಭೇಟಿಗೂ ಮುನ್ನವೇ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಅವರು ಟ್ಟಿಟ್ಟರ್‌ನಲ್ಲಿ “ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ” ಎಂದು ಟಕ್ಕರ್ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ. ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಟೀಕೆ ಮಾಡಿದ್ದಾರೆ.