ಬೆಂಗಳೂರು : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಗೆ ಸರ್ಕಾರ ಎಸ್‌ಐಟಿಗೆ ವಹಿಸಿ ಎಂದು ಬಿಜೆಪಿ MLC ಕೋಟ ಶ್ರೀನಿವಾಸ ಪೂಜಾರಿ( Kota Srinivas Poojary) ಒತ್ತಾಯಿಸಿದ್ದಾರೆ.
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧಿಸಿ ರಾಜ್ಯದಲ್ಲೇ ಭಾರೀ ಚರ್ಚೆ ನಡೆಯುತ್ತಿದೆ. ಈ ಕೃತ್ಯವನ್ನು ಖಂಡಿಸಲಾಗಿದೆ. ಅಲ್ಲದೇ ಈ ಘಟನೆ ಸಂಬಂಧಿಸಿ ಇಂದು ಮಧ್ಯಾಹ್ನ 12.30ಕ್ಕೆ ರಾಜ್ಯಪಾಲರಿಗೆ ದೂರು ನೀಡುತ್ತಿದ್ದೇವೆ. ಉಡುಪಿ, ಮಂಗಳೂರು ಭಾಗದ ಶಾಸಕರು ರಾಜಭವನಕ್ಕೆ ತೆರಳುತ್ತೇವೆ. ಪ್ರಕರಣವನ್ನು ಸರ್ಕಾರ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸ್ತಿದೆ. ಪ್ರಕರಣವನ್ನು ಎಸ್‌ಐಟಿಗೆ ವಹಿಸಿ ಸೂಕ್ತ ತನಿಖೆ ನಡೆಸಲಿ ಎಂದು ಕಿಡಿ ಕಾರಿದ್ದಾರೆ.