ಕೋಲಾರ : ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಗೃಹ ಜ್ಯೋತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ರಿಂದ ಚಾಲನೆ ನೀಡಿದ್ದಾರೆ.
ಬಳಿಕ ಶೂನ್ಯ ಬಿಲ್ ಪ್ರದರ್ಶನ ಹಾಗೂ ಫಲಾನುಭವಿಗಳಿಗೆ ಶೂನ್ಯ ಬಿಲ್‌ಗಳನ್ನು ಸಚಿವರು ವಿತರಿಸಿದ್ದಾರೆ.
ಈ ವೇಳೆ ಶಾಸಕರಾದ ಕೊತ್ತೂರು ಮಂಜುನಾಥ್, ಕೆವೈ ನಂಜೇಗೌಡ, ಎಸ್.ಎನ್ ನಾರಾಯಣಸ್ವಾಮಿ, ವೆಂಕಟಶಿವಾರೆಡ್ಡಿ, ರೂಪಕಲಾ ಶಶಿಧರ್, ಎಂ.ಎಲ್.ಸಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಡಿಸಿ ಎಸ್ಪಿ ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.