ಮೈಸೂರು : ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ 4 ಗಂಟೆಗೆ ದಸರಾ ಮಹೋತ್ಸವ ಕುರಿತು ಸಭೆ ನಡೆಯಲಿದೆ.
ದಸರಾ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಮೈಸೂರಿಗೆ ಕರೆತರಲು ಸಿದ್ದತೆ ನಡೆದಿದ್ದು. ಆಗಸ್ಟ್ 21 ರಂದು ಗಜಪಯಣ ನಡೆಸಲು ಚಿಂತನೆ ನಡೆಸಲಾಗಿದೆ.
ಈ ಸಂಬಂಧ ಇಂದು ಸಿಎಂ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ.
ಈ ಬಾರಿ ಅದ್ದೂರಿ ‘ಮೈಸೂರು ದಸರಾ’ ಮಹೋತ್ಸವ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.ಕಳೆದ ಬಾರಿ ಕೋವಿಡ್ ಹಿನ್ನೆಲೆ ರಾಜ್ಯದ ಜನರು ಸಂಕಷ್ಟಕ್ಕೆ ಒಳಗಾಗಿದ್ದರು. ಅದ್ದೂರಿಯಾಗಿ ಮೈಸೂರು ದಸರಾ ನಡೆದಿರಲಿಲ್ಲ . ಈ ಬಾರಿ ಅದ್ದೂರಿಯಾಗಿ ‘ಮೈಸೂರು ದಸರಾ’ ನಡೆಸಲು ಪ್ಲ್ಯಾನ್ ಮಾಡಲಾಗಿದೆ. ದಸರಾ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದರು.