ಬೆಂಗಳೂರು : ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ನೀತಿ ಸಂಹಿತಿ ಜಾರಿ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಜೊತೆಗೆ ಪಡಿತರ ಕಾರ್ಡ್ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು.
ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿ (Ration Card) ಕುಟುಂಬಗಳಲ್ಲಿ 4.42. ಕೋಟಿ ಫಲಾನುಭವಿಗಳು ಇದ್ದಾರೆ. ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ ಅಂತ ಮಾಹಿತಿ ನೀಡಿದರು.
ಉಳಿದಂತೆ 28 ಲಕ್ಷ ಕುಟುಂಬಗಳಲ್ಲಿ ಕಳೆದ 3 ತಿಂಗಳಲ್ಲಿ ಒಂದೂ ತಿಂಗಳು ಪಡಿತರ ಪಡೆದಿಲ್ಲ. 5,32,349 ಫಲಾನುಭವಿಗಳಿ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಲ್ಲಿ ಮೂರು ಸದಸ್ಯರಿಗಿಂತ ಕಡಿಮೆ ಸದಸ್ಯರು ಇದ್ದಾರೆ. 3,40,425 ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲ. 19,27,225 ಪಡಿತರ ಚೀಟಿಗಳಿಗೆ ಆಧಾರ್ ಜೋಡಣೆ ಆಗಿಲ್ಲ ಮತ್ತು ಅನರ್ಹ ಪಡಿತರ ಚೀಟಿ ಆಗಿವೆ. ಇವರಿಗೆ ಹಣ ಖಾತೆಗೆ ಹಾಕಿಲ್ಲ ಅಂತ ಮಾಹಿತಿ ನೀಡಿದರು.