ಬೆಂಗಳೂರು : ಬೆಂಗಳೂರಿನ ಮೂರು ಮ್ಯೂಸಿಯಂಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ ಸಂಬಂಧಿಸಿ ಕೇಂದ್ರ ವಿಭಾಗ ಶೇಖರ್ ಹೆಚ್.ಟಿ. ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಕೇಂದ್ರ ವಿಭಾಗ ಶೇಖರ್ ಹೆಚ್.ಟಿ. ಮಾತನಾಡಿದ ಅವರು, ನಿನ್ನೆ ಕೇಂದ್ರ ವಿಭಾಗದ ಮೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಮ್ಯೂಸಿಯಂ, ವಿಧಾನಸೌಧ ಠಾಣಾ ವ್ಯಾಪ್ತಿಯ ನೆಹರು ತಾರಾಲಯ, ಹೈಗ್ರೌಂಡ್ಸ್ ನ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ಗೆ ಇ ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿತ್ತು.
ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ ಕೂಡಲೇ ಡಾಗ್ ಸ್ಕ್ವಾಡ್ ಮೂಲಕ ಮೂರು ಮ್ಯೂಸಿಯಂಗಳಲ್ಲಿಯೂ ಪರಿಶೀಲನೆ ನಡೆಸಲಾಯಿತು. ಯಾವುದೇ ಬಾಂಬ್ ಪತ್ತೆ ಆಗಿಲ್ಲ ಈ ಬಗ್ಗೆ ಮೂರು ಠಾಣೆಗಳಲ್ಲಿ ದೂರು ದಾಖಲು ಮಾಡಲಾಗಿದೆ. ಇದೀಗ ಮೇಲ್ ಮೂಲ ಹುಡುಕುತ್ತಿದ್ದೀವಿ, ತನಿಖೆ ನಡೀತಿದೆ ಎಂದು ಕೇಂದ್ರ ವಿಭಾಗ ಶೇಖರ್ ಹೆಚ್.ಟಿ. ತಿಳಿಸಿದ್ದಾರೆ.